ದೇಶ

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುತ್ತೇವೆ: ರಾಹುಲ್ ಗಾಂಧಿ

ಹಳೆಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಬಿಜೆಪಿಯು ವೃದ್ಧರನ್ನು ಅವಲಂಬಿತರನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದರು.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುತ್ತೇವೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಹಳೆಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಬಿಜೆಪಿಯು ವೃದ್ಧರನ್ನು ಅವಲಂಬಿತರನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಾಗುತ್ತದೆ ಎಂದು ಭರವಸೆ ನೀಡಿದ ಅವರು, ಇದು ರಾಷ್ಟ್ರವನ್ನು ಬಲಪಡಿಸುವ ಸರ್ಕಾರಿ ನೌಕರರ ಹಕ್ಕು ಎಂದು ಹೇಳಿದರು.

'ಹಳೆಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಮೂಲಕ ಬಿಜೆಪಿ ವಯೋವೃದ್ಧರನ್ನು ಅವಲಂಬಿತರನ್ನಾಗಿ ಮಾಡಿದೆ. ದೇಶವನ್ನು ಬಲಪಡಿಸುವ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿಯನ್ನು ಪಡೆಯುವ ಹಕ್ಕಿದೆ. 'ನಾವು ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಹಳೆಯ ಪಿಂಚಣಿಯನ್ನು ಮರುಸ್ಥಾಪಿಸಿದ್ದೇವೆ. ಈಗ ಗುಜರಾತ್‌ನಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಮತ್ತು ಹಳೆಯ ಪಿಂಚಣಿಯನ್ನು ತರಲಿದೆ' ಎಂದು ರಾಹುಲ್ ಗಾಂಧಿಯವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, #CongressDegiOldPension ಎಂಬ ಹ್ಯಾಶ್‌ಟ್ಯಾಗ್ ಹಂಚಿಕೊಂಡಿದ್ದಾರೆ.

ಗುಜರಾತ್‌ನ ಹಿರಿಯ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ಮಾತನಾಡಿ, 'ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿನ ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದಂತೆ ಗುಜರಾತ್‌ನಲ್ಲಿಯೂ ತಮ್ಮ ಪಕ್ಷವು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಸೋಮವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ಸಾವಿರಾರು ನಿವೃತ್ತ ಸರ್ಕಾರಿ ನೌಕರರು ಇತ್ತೀಚೆಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಪರಿಚಯಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಇನ್ನು ಕೆಲವೇ ತಿಂಗಳುಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.