ರಾಜ್ಯದ ಎಲ್ಲ ಮದರಸಾಗಳೂ ಸರ್ಕಾರದ ನಿಯಂತ್ರಣಕ್ಕೆ ಸಾಧ್ಯತೆ: ಅಸ್ಸಾಂ ಸಚಿವ
ಅಸ್ಸಾಂನ ಮದರಸಾಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಂಡುಬಂದ ಬೆನ್ನಲ್ಲೇ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.

ಗುವಾಹಟಿ: ಅಸ್ಸಾಂನ ಮದರಸಾಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಂಡುಬಂದ ಬೆನ್ನಲ್ಲೇ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.
ಈ ಕುರಿತು ಸ್ವತಃ ಅಸ್ಸಾಂ ಶಿಕ್ಷಣ ಸಚಿವ ರನೋಜ್ ಪೆಗು ಬುಧವಾರ ಮಾಹಿತಿ ನೀಡಿದ್ದು, ಅಸ್ಸಾಂ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉಗ್ರರ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಹಲವು ಮದರಸಾಗಳ ಬೋಧಕರನ್ನು ಬಂಧಿಸಿರುವ ಹಿನ್ನೆಲೆ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.
ಅಸ್ಸಾಂ ಸರ್ಕಾರೇತರ ಶಿಕ್ಷಣ ಸಂಸ್ಥೆಗಳ (ನಿಯಂತ್ರಣ ಮತ್ತು ನಿರ್ವಹಣೆ) ಕಾಯ್ದೆ, 2006ರ ಅಡಿ ಮದರಸಾಗಳನ್ನು ನಿಯಂತ್ರಣಕ್ಕೆ ಸಾಧ್ಯತೆ ಇದೆ. ಆದರೆ ಇದಕ್ಕೆ ಸಂಬಂಧಿಸಿ ಯಾವುದೇ ನಿರ್ದಿಷ್ಟ ಹೆಜ್ಜೆಯನ್ನು ಇಟ್ಟಿಲ್ಲ. ಖಾಸಗಿ ಸೆಮಿನರಿಗಳನ್ನು ಅಸ್ಸಾಂ ಸರ್ಕಾರೇತರ ಶಿಕ್ಷಣ ಸಂಸ್ಥೆಗಳ (ನಿಯಂತ್ರಣ ಮತ್ತು ನಿರ್ವಹಣೆ) ಕಾಯಿದೆ, 2006 ರ ನಿಯಂತ್ರಣಕ್ಕೆ ತರಬಹುದೇ ಎಂದು ಸರ್ಕಾರ ಪರಿಗಣಿಸುತ್ತಿದೆ ಎಂದು ಪೆಗು ತಿಳಿಸಿದ್ದಾರೆ.
ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, 'ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸುವ ಕಾನೂನು ಈಗಾಗಲೇ ಚಾಲ್ತಿಯಲ್ಲಿದೆ. ಆದರೆ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳು ಈ ಕಾನೂನಿನಡಿ ಕಾರ್ಯ ನಿರ್ವಹಿಸುತ್ತಿಲ್ಲ. ಚಾಲ್ತಿಯಲ್ಲಿರುವ ಈ ಕಾಯ್ದೆ ಅಡಿ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಖಾಸಗಿ ಮದರಸಾಗಳು ಈ ವಿಭಾಗದಲ್ಲಿ ಬರುತ್ತವೆಯೋ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಅಸ್ಸಾಂನಲ್ಲಿ 4 ಪ್ರಮುಖ ಮುಸ್ಲಿಂ ಸಂಘಟನೆಗಳು ಸುಮಾರು 3,000 ನೋಂದಾಯಿತ ಮತ್ತು ನೋಂದಾಯಿಸಲಾಗದ ಮದರಸಾಗಳು ಚಾಲ್ತಿಯಲ್ಲಿವೆ ಎಂದು ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ಇತ್ತೀಚೆಗೆ ಹೇಳಿದ್ದರು.
ಕಳೆದ ವರ್ಷ ಏಪ್ರಿಲ್ 1ರಂದು ಸರ್ಕಾರದಡಿ ನಡೆಸಲಾಗುತ್ತಿದ್ದ 610 ಮದರಸಾಗಳನ್ನು ಪ್ರಾಥಮಿಕ, ಪ್ರೌಢ ಶಾಲೆಗಳನ್ನಾಗಿ ಪರಿವರ್ತಿಸಲಾಗಿತ್ತು. ಉಗ್ರಗಾಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಅಸ್ಸಾಂನಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಮದರಸಾಗಳಲ್ಲಿ ಪಾಠ ಮಾಡುತ್ತಿದ್ದ 42 ಶಿಕ್ಷಕರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


