ಖಾತ ಹಾಸ್ಯನಟ ರಾಜು ಶ್ರೀವಾಸ್ತವ ನಿಧನಕ್ಕೆ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸಂತಾಪ
ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅವರು 'ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದ್ದಾರೆ' ಎಂದು ಹೇಳಿದ್ದಾರೆ.

ನವದೆಹಲಿ: ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅವರು 'ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದ್ದಾರೆ' ಎಂದು ಹೇಳಿದ್ದಾರೆ.
ರಾಜು ಶ್ರೀವಾಸ್ತವ ಅವರು ಆಗಸ್ಟ್ 10 ರಂದು ಹೋಟೆಲ್‌ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ತಕ್ಷಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಂಜಿಯೋಪ್ಲಾಸ್ಟಿಗೆ ಒಳಪಡಿಸಲಾಯಿತು. ಅಂದಿನಿಂದ ವೆಂಟಿಲೇಟರ್ ನಲ್ಲಿದ್ದ ಹಾಸ್ಯನಟ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ: ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ
"ರಾಜು ಶ್ರೀವಾಸ್ತವ ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದರು. ಅವರು ನಮ್ಮನ್ನು ಬೇಗನೆ ಅಗಲಿದರು. ಆದರೆ ಹಲವಾರು ವರ್ಷಗಳ ಅವರ ಶ್ರೀಮಂತ ಕೆಲಸಕ್ಕೆ ಧನ್ಯವಾದಗಳು, ಅವರು ಅಸಂಖ್ಯಾತ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ. ಅವರ ನಿಧನ ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ಮೋದಿ ಅವರು ಹಾಸ್ಯನಟನ ಜೊತೆ ತಾವು ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


