ಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!
40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಹರಾನ್‌ಪುರ: 40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶಿಕ್ಷಕ ವೀರೇಂದ್ರ ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ 17 ವರ್ಷದ ಬಾಲಕಿ ಮಂಗಳವಾರ ತಡರಾತ್ರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.
ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಅವರಿಬ್ಬರು ಸೆಪ್ಟೆಂಬರ್ 3 ರಿಂದ ಕಾಣೆಯಾಗಿದ್ದರು ಎಂದು ಅವರು ಹೇಳಿದರು.
ಬಾಲಕಿ ಕುಟುಂಬವು ಅಪಹರಣ ಪ್ರಕರಣ ದಾಖಲಿಸಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದದ್ದರು. ಅವರು ಪದೇ ಪದೆ ಸ್ಥಳವನ್ನು ಬದಲಾಯಿಸುತ್ತಿದ್ದರಿಂದ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ್ದಾರೆ.
ಸಂಜೆ, ಆ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮಲು ಪ್ರಾರಂಭಿಸಿದೆ. ಆಗ ಪೊಲೀಸರು ಕಾಡಿಗೆ ಹೋದಾಗ ಎರಡು ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಮೃತದೇಹಗಳ ಸ್ಥಿತಿ ನೋಡಿದರೆ ಇಬ್ಬರೂ ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದರು.
ಈ ಪ್ರದೇಶದಿಂದ ಬೈಕನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆದರೆ, ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


