ದೇಶ

ರೋಡ್ ಡಿವೈಡರ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ದಾರುಣ ಸಾವು; ವಾಹನ ಸಮೇತ ಚಾಲಕ ನಾಪತ್ತೆ

ದೆಹಲಿಯಲ್ಲಿ ಮಂಗಳವಾರ ತಡರಾತ್ರಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದು ನಾಲ್ವರು ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸೀಮಾಪುರಿ ಎಂಬಲ್ಲಿ ರಸ್ತೆ ವಿಭಜಕದ ಮೇಲೆ ಆರು ಮಂದಿ ಮಲಗಿದ್ದರು.

ರೋಡ್ ಡಿವೈಡರ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ದಾರುಣ ಸಾವು; ವಾಹನ ಸಮೇತ ಚಾಲಕ ನಾಪತ್ತೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯಲ್ಲಿ ಮಂಗಳವಾರ ತಡರಾತ್ರಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದು ನಾಲ್ವರು ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸೀಮಾಪುರಿ ಎಂಬಲ್ಲಿ ರಸ್ತೆ ವಿಭಜಕದ ಮೇಲೆ  ಆರು ಮಂದಿ ಮಲಗಿದ್ದರು.

ವೇಗವಾಗಿ ಬಂದ ಟ್ರಕ್​ ಅವರ ಮೇಲೆ ಹಾದು ಹೋಗಿದೆ. ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ನಾಲ್ಕು ಮಂದಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬಾತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಮೃತಪಟ್ಟಿದ್ದಾನೆ.  ಮತ್ತೊಬ್ಬ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

ಮೃತರನ್ನು ಕರೀಂ(52), ಚೋಟ್ಟೆ ಖಾನ್ಸ್(25), ಶಾ ಆಲಂ(38) ಮತ್ತು ರಾಹುಲ್(45) ಎಂದು ಗುರುತಿಸಲಾಗಿದೆ. ಮನೀಶ್(16) ಮತ್ತು ಪ್ರದೀಪ್(30) ಗಾಯಗೊಂಡವರು. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ವಾಹನದ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.