ವ್ಯತ್ಯಾಸವೇನಿಲ್ಲ.. ಡಾ. ಸಿಂಗ್ ರೀತಿಯಲ್ಲೇ ಕಾಂಗ್ರೆಸ್ ನ ನೂತನ ಅಧ್ಯಕ್ಷರೂ ರಿಮೋಟ್ ಕಂಟ್ರೋಲ್ಡ್: ಬಿಜೆಪಿ
ಹೊಸ ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕತ್ವ ತಲ್ಲೀನವಾಗಿರುವಂತೆಯೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ 'ರಿಮೋಟ್ ಕಂಟ್ರೋಲ್' ಎಂದು ವ್ಯಂಗ್ಯ ಮಾಡಿದೆ.

ನವದೆಹಲಿ: ಹೊಸ ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕತ್ವ ತಲ್ಲೀನವಾಗಿರುವಂತೆಯೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ 'ರಿಮೋಟ್ ಕಂಟ್ರೋಲ್' ಎಂದು ವ್ಯಂಗ್ಯ ಮಾಡಿದೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು, ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಸಂಪೂರ್ಣ ನಿಯಂತ್ರಣ 'ಆ ಕುಟುಂಬದ್ದೇ' ಆಗಿರುತ್ತದೆ. ನೂತನ ಅಧ್ಯಕ್ಷರು ಗಾಂಧಿ ಕುಟುಂಬದ "ಪ್ರಾಕ್ಸಿ" ಆಗಿರುತ್ತಾರೆ. ಮಾಜಿ ಪ್ರಧಾನಿ "ಮನಮೋಹನ್ ಸಿಂಗ್ ಅವರಂತೆ" ಅವರನ್ನೂ ಗಾಂಧಿ ಕುಟುಂಬ ರಿಮೋಟ್ ಕಂಟ್ರೋಲ್ ಮಾಡುತ್ತದೆ ಎಂದು ಹೇಳಿದ್ದಾರೆ.
ಮುಂದಿನ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸ್ಪರ್ಧೆ ವಿಚಾರ ಚರ್ಚೆಯಾಗುತ್ತಿರುವಂತೆಯೇ ಬಿಜೆಪಿ ಈ ರೀತಿಯ ಪ್ರತಿಕ್ರಿಯೆ ನೀಡಿದೆ.
ಯಾರು ಅಧ್ಯಕ್ಷರಾಗುತ್ತಾರೆ? ಕಾಂಗ್ರೆಸ್ ಶಾಸಕರು ನಿರ್ಧರಿಸಬೇಕಲ್ಲವೇ? ಗಾಂಧಿಯವರಿಗೆ ರಿಮೋಟ್ ಕಂಟ್ರೋಲ್ ಇದ್ದರೆ ಈ ನೆಪಮಾತ್ರ ಚುನಾವಣೆ ಏಕೆ? ಎಂದು ಪೂನವಾಲಾ ಹೇಳಿದ್ದಾರೆ. 'ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರು ಗಾಂಧಿಗಳ ಪ್ರಾಕ್ಸಿಯಾಗುತ್ತಾರೆ ಮತ್ತು ಮನಮೋಹನ್ ಸಿಂಗ್ ಅವರನ್ನು ಸೋನಿಯಾ ಗಾಂಧಿಯವರಂತೆ ಗಾಂಧಿಗಳು ಹೇಗೆ ರಿಮೋಟ್ ಕಂಟ್ರೋಲ್ ಮಾಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಚುನಾವಣಾ ಪ್ರಕ್ರಿಯೆಯು ಕೇವಲ ಕಣ್ಣೊರೆಸುವ ತಂತ್ರಗಾರಿಕೆ ಎಂದು ಪೂನಾವಾಲಾ ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಯಾರೇ ಮುಂದಿನ ಅಧ್ಯಕ್ಷರಾದರೂ, ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿರುತ್ತಾರೆ ಎಂದು ಇತ್ತೀಚೆಗೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


