ಚಂಡೀಗಢ ಖಾಸಗಿ ವಿಡಿಯೋ ವೈರಲ್ ಪ್ರಕರಣ: ಸೇನಾ ಸಿಬ್ಬಂದಿ ಬಂಧನ
ಪಂಜಾಬ್‌ನ ಚಂಡೀಗಢ ವಿಶ್ವವಿದ್ಯಾಲಯದ ಹುಡುಗಿಯರ ಪೋರ್ನ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಚಂಡೀಗಢ: ಪಂಜಾಬ್‌ನ ಚಂಡೀಗಢ ವಿಶ್ವವಿದ್ಯಾಲಯದ ಹುಡುಗಿಯರ ಪೋರ್ನ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಹಾಸ್ಟೆಲ್ ನ ಬಾತ್ ರೂಂನಲ್ಲಿ ಹಲವಾರು ಯುವತಿಯ ಆಕ್ಷೇಪಾರ್ಹ ವೀಡಿಯೊ ಚಿತ್ರೀಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಪ್ರಕರಣ ಸಂಬಂಧ ಸೇನಾ ಸಿಬ್ಬಂದಿ ಸಂಜೀವ್ ಸಿಂಗ್ ಎಂಬುವರನ್ನು ಅರುಣಾಚಲ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದು ಅವರನ್ನು ಮೊಹಾಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.
ಚಂಡೀಗಢ ವಿಶ್ವವಿದ್ಯಾಲಯ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿದೆ. ಭಾರತೀಯ ಸೇನೆ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಪೊಲೀಸರ ನೆರವಿನೊಂದಿಗೆ ಅರುಣಾಚಲ ಪ್ರದೇಶದ ಸೆಲಾ ಪಾಸ್‌ನಲ್ಲಿ ಆರೋಪಿ ಸೇನಾ ಸಿಬ್ಬಂದಿ ಸಂಜೀವ್ ಸಿಂಗ್ ಎಂಬುವರನ್ನು ಬಂಧಿಸಲಾಗಿದ್ದು ಮೊಹಾಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಲ್ಡಿ ಸಿಜೆಎಂ ಬೊಮ್ಡಿಲ್ಲಾದಿಂದ ಟ್ರಾನ್ಸಿಟ್ ರಿಮಾಂಡ್ ಪಡೆಯಲಾಗಿದೆ ಎಂದು ಡಿಜಿಪಿ ಟ್ವೀಟ್ ಮಾಡಿದ್ದಾರೆ.
ಹಿಮಾಚಲ ಪ್ರದೇಶದ ವಿದ್ಯಾರ್ಥಿನಿ ಹಾಗೂ ಇಬ್ಬರು ಯುವಕರು ಸೇರಿದಂತೆ ಮೂವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು.
ಹಾಸ್ಟೆಲ್‌ನ ಸಿಬ್ಬಂದಿಯೊಬ್ಬರು ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿಗಳ ಹಲವಾರು ಆಕ್ಷೇಪಾರ್ಹ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಪಂಜಾಬ್‌ನ ಮೊಹಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದವು.
ಇನ್ನು ಕೆಲ ವಿದ್ಯಾರ್ಥಿಗಳು ವಿಡಿಯೋ ಸೋರಿಕೆಯಾಗಿದೆ ಎಂದು ಆರೋಪಿಸಿದ್ದರು. ಈ ಆರೋಪಗಳು 'ಸುಳ್ಳು ಮತ್ತು ಆಧಾರರಹಿತ' ಎಂದು ವಿಶ್ವವಿದ್ಯಾನಿಲಯ ಅಧಿಕಾರಿಗಳು ತಳ್ಳಿಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


