ದೇಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐದಾರು ಶ್ರೀಮಂತ ಭಾರತೀಯರಿಗಾಗಿ ಇದೆ: ರಾಹುಲ್ ಗಾಂಧಿ

ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಸರ್ಕಾರ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಅಲ್ಲ. ಬದಲಿಗೆ ಐದಾರು ಶ್ರೀಮಂತ ಭಾರತೀಯರಿಗಾಗಿ ಎಂದು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐದಾರು ಶ್ರೀಮಂತ ಭಾರತೀಯರಿಗಾಗಿ ಇದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಸರ್ಕಾರ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಅಲ್ಲ. ಬದಲಿಗೆ ಐದಾರು ಶ್ರೀಮಂತ ಭಾರತೀಯರಿಗಾಗಿ ಎಂದು ಆರೋಪಿಸಿದ್ದಾರೆ.

'ಪ್ರಧಾನಿ ಆಗಾಗ್ಗೆ ಕೇಳುತ್ತಾರೆ- '70 ಸಾಲ್ ಮೇ ಕ್ಯಾ ಕಿಯಾ?' ಎಂದು. ಆದರೆ, ನಾವು ಭಾರತಕ್ಕೆ ಎಂದಿಗೂ ಅತಿ ಹೆಚ್ಚು ನಿರುದ್ಯೋಗವನ್ನು ನೀಡಿಲ್ಲ, ಇಂದು ಎದುರಿಸುತ್ತಿರುವ ದಾಖಲೆಯ ಬೆಲೆ ಏರಿಕೆಯನ್ನು ನಾವು ಎಂದಿಗೂ ಭಾರತಕ್ಕೆ ನೀಡಿಲ್ಲ' ಎಂದು ಟ್ವೀಟ್‌ ಮಾಡಿದ್ದಾರೆ.

'ಈಗಿರುವ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ರೈತರು, ಯುವಕರು ಮತ್ತು ಮಹಿಳೆಯರ ಸರ್ಕಾರವಲ್ಲ. ಇದು ತಾವು ಬಯಸಿದ ವ್ಯವಹಾರದಲ್ಲಿ ಏಕಸ್ವಾಮ್ಯವನ್ನು ಹೊಂದಿರುವ ಐದಾರು ಶ್ರೀಮಂತ ಭಾರತೀಯರ ಸರ್ಕಾರವಾಗಿದೆ' ಎಂದು ಅವರು ಆರೋಪಿಸಿದ್ದಾರೆ.

ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕೇಂದ್ರದ ವಿರುದ್ಧ ಪದೇ ಪದೆ ವಾಗ್ದಾಳಿ ನಡೆಸುತ್ತಿದ್ದು, ಸರ್ಕಾರದ ನೀತಿಗಳು ದೇಶದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.