ರೆಸಾರ್ಟ್ ರಿಸೆಪ್ಶನಿಸ್ಟ್ ಹತ್ಯೆ ಪ್ರಕರಣ: ಐಟಿಐ ಘಾಟ್‌ನಲ್ಲಿ ನಡೆದ ಅಂಕಿತಾ ಅಂತ್ಯಸಂಸ್ಕಾರ!
ಅಂಕಿತಾ ಭಂಡಾರಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಐಟಿಐ ಘಾಟ್‌ನಲ್ಲಿ ಭಾರೀ ಪೊಲೀಸ್ ಭದ್ರತೆಯ ನಡುವೆ ನೆರವೇರಿತು.

ಡೆಹ್ರಾಡೂನ್: ಅಂಕಿತಾ ಭಂಡಾರಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಐಟಿಐ ಘಾಟ್‌ನಲ್ಲಿ ಭಾರೀ ಪೊಲೀಸ್ ಭದ್ರತೆಯ ನಡುವೆ ನೆರವೇರಿತು.
ತುಂಬಾ ದುಃಖದ ವಾತಾವರಣದಲ್ಲಿ ಅಂಕಿತಾಳ ಅಣ್ಣ ಅಜಯ್ ತಂಗಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮುನ್ನ, ಶ್ರೀನಗರ ವೈದ್ಯಕೀಯ ಕಾಲೇಜಿನ ಶವಾಗಾರದಿಂದ ಭಾರೀ ಪ್ರತಿಭಟನೆಯ ನಡುವೆ ಅಂಕಿತಾ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಐಟಿಐ ಘಾಟ್‌ಗೆ ಕೊಂಡೊಯ್ಯುವಾಗ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಜನರು ಮತ್ತು ಅಂಕಿತಾ ಗ್ರಾಮದ ದೋಬ್ ಶ್ರೀಕೋಟ್‌ನ ಜನರು ಸಹ ಭಾಗವಹಿಸಿದ್ದರು. ಈ ವೇಳೆ ಪ್ರತಿಭಟನಾಕಾರರೊಂದಿಗೆ ಪೊಲೀಸರೊಂದಿಗೆ ಮಾತಿನ ಚಕಮಕಿಯೂ ನಡೆಯಿತು. ಬಿಗಿ ವಾತಾವರಣದ ನಡುವೆ, ಪೊಲೀಸರು ಅಂಕಿತಾ ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಐಟಿಐ ಘಾಟ್‌ಗೆ ಕೊಂಡೊಯ್ಯಲಾಯಿತು.
ಅಂಕಿತಾ ಶವ ಶನಿವಾರ ಬೆಳಗ್ಗೆ ಋಷಿಕೇಶದ ಸಮೀಪವಿರುವ ಚೀಲಾ ಕಾಲುವೆ ಬಳಿ ಸಿಕ್ಕಿತ್ತು. ಆಕೆ ಕಾಣೆಯಾದ ಬಗ್ಗೆ ದೂರು ನೀಡಿದ ಆರು ದಿನಗಳ ನಂತರ ಮೃತದೇಹ ಪತ್ತೆಯಾಗಿತ್ತು.
ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಒಡೆತನದ ರಿಷಿಕೇಶದಲ್ಲಿರುವ ವನತಾರಾ ರೆಸಾರ್ಟ್‌ಗೆ ಸ್ಥಳೀಯರು ಬೆಂಕಿ ಹಚ್ಚಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


