ದೇಶ

ನೇಮಕಾತಿ ಅಕ್ರಮ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ 14 ದಿನ ನ್ಯಾಯಾಂಗ ಬಂಧನ

ದೆಹಲಿ ವಕ್ಫ್‌ ಬೋರ್ಡ್‌ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ...

ನೇಮಕಾತಿ ಅಕ್ರಮ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ 14 ದಿನ ನ್ಯಾಯಾಂಗ ಬಂಧನ
ಅಮನತುಲ್ಲಾ ಖಾನ್
Published On :

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದೆ.

ಈ ಮಧ್ಯೆ ಶಾಸಕ ಅಮಾನತುಲ್ಲಾ ಖಾನ್ ಅವರ ವಕೀಲರ ತಂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.

ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸೆಪ್ಟೆಂಬರ್ 16 ರಂದು ಅವರ ಮತ್ತು ಅವರ ಸಹಾಯಕರ ಮನೆಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ಒಂದು ದಿನದ ನಂತರ, ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

2020ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ 12 ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್‌ಗಳನ್ನು ಜಪ್ತಿ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.