ದೇಶ

ಕೋವಿಡ್-19: ದೇಶದಲ್ಲಿ 4,129 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,129 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,72,243ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ 4,129 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,129 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,72,243ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 43,415ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಕೇರಳದಲ್ಲಿ 13 ಮಂದಿ ಸೇರಿದಂತೆ 20 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ 5,28,530 ಜನರು ಮೃತಪಟ್ಟಿದ್ದಾರೆ.

ಸದ್ಯ ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 1.10ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.51ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.61ರಷ್ಟಿದೆ. ಈವರೆಗೆ ದೇಶದಲ್ಲಿ 4,40,00,298 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದ ಅಡಿಯಲ್ಲಿ 217.686 ಕೋಟಿ ಕೋವಿಡ್ ವಿರುದ್ದದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.