ಸಿಬಿಐ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರ್ ವಾಲ್, ಸಂಪತ್ ಮೀನಾ ಮುಂದುವರಿಕೆ
ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.
ರಾಕೇಶ್ ಅಗರವಾಲ್ ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 2 ರಿಂದ ಆರು ತಿಂಗಳ ಅವಧಿಗೆ ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಅಗರವಾಲ್ ಅವರು ಹಿಮಾಚಲ ಪ್ರದೇಶ ಕೇಡರ್‌ನ 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿ.
1994ರ ಬ್ಯಾಚ್‌ನ ಜಾರ್ಖಂಡ್ ಕೇಡರ್‌ನ ಐಪಿಎಸ್ ಅಧಿಕಾರಿ ಮೀನಾ ಅವರ ಅಧಿಕಾರಾವಧಿಯನ್ನು 2024ರ ಸೆಪ್ಟೆಂಬರ್ 21 ರವರೆಗೆ ವಿಸ್ತರಿಸಲು ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


