ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಉದ್ಯಮಿ ವಿಜಯ್ ನಾಯರ್ ರನ್ನು ಬಂಧಿಸಿದ ಸಿಬಿಐ!

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ನಾಯರ್ ಅವರನ್ನು ಸಿಬಿಐ ಬಂಧಿಸಿದೆ. ಈ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಆರೋಪಿಯಾಗಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಉದ್ಯಮಿ ವಿಜಯ್ ನಾಯರ್ ರನ್ನು ಬಂಧಿಸಿದ ಸಿಬಿಐ!
ಸಿಬಿಐ ಕಚೇರಿ
Published On :

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ನಾಯರ್ ಅವರನ್ನು ಸಿಬಿಐ ಬಂಧಿಸಿದೆ. ಈ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಆರೋಪಿಯಾಗಿದ್ದಾರೆ. 

ಕೆಲಕಾಲ ವಿದೇಶದಲ್ಲಿದ್ದ ನಾಯರ್ ಅವರನ್ನು ಮಂಗಳವಾರ ಸಿಬಿಐ ಕಚೇರಿಗೆ ವಿಚಾರಣೆಗೆ ಕರೆದಿದ್ದು ಇದೀಗ ಅವರನ್ನು ಬಂಧಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ಪರವಾನಗಿ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ 'ಪಿತೂರಿ'ಯಲ್ಲಿ ಅವರ ಪಾತ್ರಕ್ಕಾಗಿ ನಾಯರ್ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಂಟರ್ಟೈನಮೆಂಟ್ ಮತ್ತು ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯಾದ ಓನ್ಲಿ ಮಚ್ ಲೌಡರ್‌ನ ಮಾಜಿ ಸಿಇಒ ನಾಯರ್ ಪರವಾಗಿ ಸಿಸೋಡಿಯಾ ಅವರ ಸಹವರ್ತಿ ಅರ್ಜುನ್ ಪಾಂಡೆ ಒಮ್ಮೆ ಮದ್ಯದ ಉದ್ಯಮಿ ಸಮೀರ್ ಮಹೇಂದ್ರು ಅವರಿಂದ ಸುಮಾರು 2-4 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದರು ಎಂದು ಎಫ್‌ಐಆರ್ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.