ಗರ್ಬಾ ಸ್ಥಳದಲ್ಲಿ ನಿಂತಿದ್ದ ಮುಸ್ಲಿಂ ಯುವಕರಿಗೆ ಭಜರಂಗದಳ ಕಾರ್ಯಕರ್ತರಿಂದ ಹಲ್ಲೆ, ವಿಡಿಯೋ ವೈರಲ್!
ಗರ್ಬಾ ಸ್ಥಳದಲ್ಲಿ ನಾಲ್ವರು ಮುಸ್ಲಿಂ ಯುವಕರ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಾಂಧೀನಗರ: ಗರ್ಬಾ ಸ್ಥಳದಲ್ಲಿ ನಾಲ್ವರು ಮುಸ್ಲಿಂ ಯುವಕರ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವರಾತ್ರಿ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಸಿಂಧು ಭವನ ರಸ್ತೆಯ ಗರ್ಭಾ ಸ್ಥಳದಲ್ಲಿ ಇತರ ಧರ್ಮದ ಜನರು ಬರದಂತೆ ಭಜರಂಗದಳದ ಸ್ವಯಂಸೇವಕರು ತಪಾಸಣೆ ನಡೆಸಿದ್ದರು. ಈ ವೇಳೆ ಮುಸ್ಲಿಂ ಯುವಕರು ಅಲ್ಲಿ ಕಾಣಿಸಿಕೊಂಡಿದ್ದರಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಲವ್ ಜಿಹಾದ್ ತಡೆಯಲು ನಮ್ಮ ಸ್ವಯಂಸೇವಕರು ಅವರನ್ನು ಹಿಡಿದು ಥಳಿಸಿದ್ದಾರೆ ಎಂದು ಗುಜರಾತ್ ವಿಹೆಚ್ ವಿ ವಕ್ತಾರ ಹಿತೇಂದ್ರ ಸಿನ್ಹಾ ರಜಪೂತ್ ಅವರು ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಭಜರಂಗದಳದ ಕಾರ್ಯಕರ್ತರು ಲವ್ ಜಿಹಾದ್ ವಿರುದ್ಧದ ಸಂದೇಶಗಳನ್ನು ಪ್ರದರ್ಶಿಸುವ ಫಲಕಗಳನ್ನು ಹಿಡಿದಿದ್ದಾರೆ. ಅಲ್ಲದೇ ಯುವಕರು, ಮುಸ್ಲಿಂರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ. ಇನ್ನು ಅಲ್ಲಿ ಸಿಕ್ಕ ಮುಸ್ಲಿಂ ಯುವಕರ ಹಣೆಗೆ ಬಲವಂತವಾಗಿ ತಿಲಕ ಇಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


