ದೇಶ

ಛತ್ತೀಸ್ ಗಢ: ಕೊಡಲಿಯಿಂದ ಹೊಡೆದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಆತಂಕಕಾರಿ ಘಟನೆಯೊಂದರಲ್ಲಿ ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಹೊಡೆದು ಹತ್ಯೆ ಮಾಡಲಾಗಿದೆ.

ಛತ್ತೀಸ್ ಗಢ: ಕೊಡಲಿಯಿಂದ ಹೊಡೆದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!
ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು
Published On :

ದುರ್ಗ್: ಆತಂಕಕಾರಿ ಘಟನೆಯೊಂದರಲ್ಲಿ ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಹೊಡೆದು ಹತ್ಯೆ ಮಾಡಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ  ಅಶ್ವದಳದೊಂದಿಗೆ  ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹತ್ಯೆ ಮಾಡಲು ಬಳಸಲಾದ ಕೊಡಲಿಯನ್ನು ವಶಕ್ಕೆ ಪಡೆದ್ದು, ಮೃತನ ಸಹೋದರ ಮೇಲೆ ಅನುಮಾನ ವ್ಯಕ್ತವಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

ಮೃತರನ್ನು ಬೋಲನಾಥ ಯಾದವ್ (34) ಪತ್ನಿ ನೈಲಾ ಯಾದವ್ (30) ಪುತ್ರ ಪರ್ಮೋದಾ ಯಾದವ್ (8) ಹಾಗೂ ಪುತ್ರಿ ಮುಕ್ತ ಯಾದವ್ (13) ಎಂದು ಗುರುತಿಸಲಾಗಿದೆ. ಓಡಿಶಾ ಮೂಲದ ಮೃತರು ದುರ್ಗ್ ಜಿಲ್ಲೆಯ ಕುಮ್ಹಾರಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಲಿಯಿಂದ ಹೊಡೆದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮೃತನ ಸಹೋದರ ಮೇಲೆ ಅನುಮಾನವಿದೆ. ಮೃತರ ದೇಹದ ಮೇಲೆ ಗಾಯದ ಗುರುತಿದೆ. ಭೂ ವಿವಾದ ಸಂಬಂಧ ಈ ಹತ್ಯೆ ನಡೆದಿರಬಹುದು. ಫಿಂಂಗರ್ ಫ್ರಿಂಟ್ಸ್ ತೆಗೆದುಕೊಳ್ಳಲಾಗಿದೆ ಎಂದು ಎಸ್ ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.