ಕೋವಿಡ್-19: ಕಳೆದ 24 ಗಂಟೆಗಳಲ್ಲಿ 27 ಜನರು ಸಾವು, 4,272 ಹೊಸ ಪ್ರಕರಣ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,272 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,83,360 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,272 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,83,360 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 16 ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,611 ಮಂದಿ ಕೋವಿಡ್‌ನಿಂದ ಪ್ರಾಣಕಳೆದುಕೊಂಡಿದ್ದಾರೆ. ಇದೇ ಅವಧಿಯಲ್ಲಿ 4,474 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.09 ರಷ್ಟು ಸಕ್ರಿಯ ಪ್ರಕರಣಗಳಿದ್ದು, ಸದ್ಯ ದೇಶದಲ್ಲಿ 40,750 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72 ರಷ್ಟಿದ್ದು, ಇದುವರೆಗೆ 4,40,13,999 ಮಂದಿ ಗುಣಮುಖರಾಗಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 1.35ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 218.17 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


