ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ 

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,947 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,87,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ 
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,947 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,87,307ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 39,583ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಾದ್ಯಂತ 18 ಜನರು ಸಾವಿಗೀಡಾಗುವ ಮೂಲಕ ಈವರೆಗೆ 5,28,629 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಈವರೆಗೆ 5,28,629 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.09ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.73ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೈನಂದಿನ ಪಾಸಿಟಿವಿಟಿ ದರ ಶೇ 1.23ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 218.52 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.