ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ನಾಮಪತ್ರ ಸಲ್ಲಿಸಿದ ಕೆ ಎನ್ ತ್ರಿಪಾಠಿ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಜಾರ್ಖಂಡ್ ಮಾಜಿ ಸಚಿವ ಕೆ ಎನ್ ತ್ರಿಪಾಠಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ನಾಮಪತ್ರ ಸಲ್ಲಿಸಿದ ಕೆ ಎನ್ ತ್ರಿಪಾಠಿ
ಕೆ ಎನ್ ತ್ರಿಪಾಠಿ
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಜಾರ್ಖಂಡ್ ಮಾಜಿ ಸಚಿವ ಕೆ ಎನ್ ತ್ರಿಪಾಠಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಇಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ತ್ರಿಪಾಠಿ ಅವರು ನಾಮಪತ್ರ ಸಲ್ಲಿಸಿದರು.

ತ್ರಿಪಾಠಿಗೆ ಪ್ರತಿಸ್ಪರ್ಧಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ತ್ರಿಪಾಠಿ ಅವರು ಕಾಂಗ್ರೆಸ್-ಸಂಯೋಜಿತ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್(ತ್ರಿಪಾಠಿ ಬಣ) ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.