ದೇಶ

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ

ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ
ಸಾಂದರ್ಭಿಕ ಚಿತ್ರ
Published On :

ಹೈದರಾಬಾದ್(ತೆಲಂಗಾಣ): ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.

ನಿನ್ನೆ ಸೋಮವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಿಯಾಪುರ್ ಪೊಲೀಸ್ ಠಾಣೆಗೆ ಫೋನ್ ಕರೆ ಬಂದಿತ್ತು. 

ತಕ್ಷಣವೇ ಪೊಲೀಸ್ ಅಧಿಕಾರಿಗಳ ಒಂದು ತಂಡ ಸ್ಥಳಕ್ಕೆ ಧಾವಿಸಿ ನೋಡಿದಾಗ ತಮ್ಮ ನಿವಾಸದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಯಿತು. ಅವರು ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಎಂದು ಗೊತ್ತಾಗಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಲಿಲ್ಲ. 

ಕೆಲದಿನಗಳಿಂದ ಜ್ಞಾನೇಂದ್ರ ಪ್ರಸಾದ್ ತಮ್ಮ ಪೆಂಟ್ ಹೌಸ್ ನಲ್ಲಿ ವಾಸವಾಗಿದ್ದರು ಎಂದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಶವವನ್ನು ನಂತರ ಸ್ಥಳೀಯ ಆಸ್ಪತ್ರೆಗೆ ಶವಪರೀಕ್ಷೆಗೆ ವರ್ಗಾಯಿಸಲಾಯಿತು. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.