ಛತ್ತೀಸ್‌ಗಢ: ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು
ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ...

ಕೊರ್ಬಾ: ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಕಾರ್ಮಿಕನನ್ನು ಸುಮನ್ ತಿಗ್ಗಾ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ಪ್ರತೀಕ್ಷಾ ಬಸ್ ನಿಲ್ದಾಣದಲ್ಲಿ ಮತ್ತೊಬ್ಬ ಕಾರ್ಮಿಕನೊಂದಿಗೆ ರಾಷ್ಟ್ರಧ್ವಜವನ್ನು ಕಟ್ಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮಣೇಂದ್ರಗಢ ಉಪವಿಭಾಗೀಯ ಪೊಲೀಸ್ ಅಧಿಕಾರಿ(ಎಸ್‌ಡಿಒಪಿ) ರಾಕೇಶ್ ಕುರ್ರೆ ಅವರು ಹೇಳಿದ್ದಾರೆ.
"ಘಟನೆಯಲ್ಲಿ ಸುಮನ್ ತಿಗ್ಗಾ ಸಹೋದ್ಯೋಗಿ ರಾಮಕೃಪಾಲ್ ಸಿಂಗ್ (35) ಸಹ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಮಿಕರ ಸಂಘ ತಿಗ್ಗಾ ಸಾವಿನ ನಂತರ ಪ್ರತಿಭಟನೆ ನಡೆಸಿದ್ದು, ಮೃತನ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ" ಎಂದು ಕುರ್ರೆ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


