ದೇಶ

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!
ಮುಖೇಶ್ ಅಂಬಾನಿ
Published On :

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆಗೆ 8 ಬಾರಿ ಬೆದರಿಕೆ ಕರೆ ಮಾಡಲಾಗಿತ್ತು. ಕರೆ ಮಾಡಿದವನನ್ನು ಅಫ್ಜಲ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇಂದು ಒಟ್ಟು ಎಂಟು ಬೆದರಿಕೆ ಕರೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದರು.

'ಅಪರಿಚಿತ ವ್ಯಕ್ತಿಯಿಂದ ಮುಕೇಶ್ ಅಂಬಾನಿಗೆ ಜೀವ ಬೆದರಿಕೆಯ ಒಟ್ಟು 8 ಕರೆಗಳನ್ನು ಮಾಡಲಾಗಿದೆ. ಈ ಬಗ್ಗೆ ಪರಿಶೀಲಿಸಲು ಮುಂಬೈ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ. ತರಂಗ್ ಗಿಂಚಂದಾನಿ ಹೇಳಿದ್ದಾರೆ.

2021ರ ಮಾರ್ಚ್‌ನಲ್ಲಿ ಸ್ಫೋಟಕ ತುಂಬಿದ್ದ ಎಸ್‌ಯುವಿ ವಾಹನ ದಕ್ಷಿಣ ಮುಂಬೈಯಲ್ಲಿರುವ ಅಂಬಾನಿ ನಿವಾಸದ ಸಮೀಪ ಪತ್ತೆಯಾಗಿತ್ತು. ಅದೇ ವರ್ಷ ನವೆಂಬರ್‌ನಲ್ಲಿ ಅವರ ನಿವಾಸದ ಸುತ್ತ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದಿತ್ತು. ಬಳಿಕ ಅಂಬಾನಿ ಕುಟುಂಬದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.