ಉತ್ತರ ಪ್ರದೇಶ: 35 ವರ್ಷದ ಪತ್ನಿಯನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ!
ಉತ್ತರ ಪ್ರದೇಶದ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಗಳದ ವೇಳೆ ನಿವೃತ್ತ ಸೇನಾ ವ್ಯಕ್ತಿಯೊಬ್ಬ ತನ್ನ 35 ವರ್ಷದ ಪತ್ನಿಗೆ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಲಖನೌ: ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಗಳದ ವೇಳೆ ನಿವೃತ್ತ ಯೋಧರೊಬ್ಬರು ತಮ್ಮ 35 ವರ್ಷದ ಪತ್ನಿಗೆ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ನ್ಯೂ ತುಳಸಿ ಅಡ್ಡಾ ಪ್ರದೇಶದಲ್ಲಿ ಬುಧವಾರ ರಾತ್ರಿ ಸತೀಶ್ ಕುಮಾರ್ ಯಾದವ್ ಅವರು, ತಮ್ಮ ಪತ್ನಿ ಸಪ್ನಾಳನ್ನು ತಮ್ಮ ಪರವಾನಗಿ ಪಡೆದ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಂದಿದ್ದಾರೆ ಎಂದು ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಪಿಲ್ ದೇವ್ ತಿಳಿಸಿದ್ದಾರೆ.
ಪತಿ-ಪತ್ನಿ ಇಬ್ಬರೂ ಜಗಳವಾಡಿದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಸತೀಶ್ ಪರಾರಿಯಾಗಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


