ಕೋವಿಡ್-19: ಕಳೆದ 24 ಗಂಟೆಗಳಲ್ಲಿ 9,250 ಹೊಸ ಪ್ರಕರಣ ಪತ್ತೆ; ಕೇರಳದಲ್ಲಿ ನಾಲ್ಕು ಸೇರಿ 41 ಜನರು ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,250 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,250 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ ನಾಲ್ವರು ಸೇರಿದಂತೆ 41 ಜನರು ಸಾವಿಗೀಡಾಗಿದ್ದು, ದೇಶದಲ್ಲಿ ಈವರೆಗೆ 5,27,597 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.20ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.62ರಷ್ಟಿದೆ. ಈವರೆಗೆ 4,37,83,788 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 2.50ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ಇನ್ನು ವಾರದ ಪಾಸಿಟಿವಿಟಿ ದರ 2.80 ರಷ್ಟಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 211.91 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ವಿಚರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


