ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 9,436 ಹೊಸ ಪ್ರಕರಣ ಪತ್ತೆ, 30 ಸೋಂಕಿತರು ಸಾವು
ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 86,591ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ 30 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.19ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.62ರಷ್ಟಿದೆ. ಈವರೆಗೆ 4,37,93,787 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 2.93ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ಇನ್ನು ವಾರದ ಪಾಸಿಟಿವಿಟಿ ದರ 2.70 ರಷ್ಟಿದೆ.ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 211.66 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ವಿಚರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


