ನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ: ಮಮತಾ ಬ್ಯಾನರ್ಜಿ
'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು (ಕೇಂದ್ರ) ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯಗಳ (ಇ.ಡಿ) ದಾಳಿಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ವಾಗ್ದಾಳಿ ನಡೆಸಿದ್ದು, ಬಂಗಾಳದಲ್ಲಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಪಕ್ಷದ ವಿದ್ಯಾರ್ಥಿ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಬಂಗಾಳದಲ್ಲಿ ಸಿಬಿಐ, ಇ.ಡಿ ಮತ್ತು ಇತರ ಕೇಂದ್ರದ ಅಧಿಕಾರಿಗಳ ವಿರುದ್ಧವೂ ನನ್ನ ಬಳಿ ಪ್ರಕರಣಗಳಿವೆ. ಹೀಗಾಗಿ, ನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ' ಎಂದು ಹೇಳಿದರು.
'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು (ಕೇಂದ್ರ) ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.
ಈ ಹಿಂದೆ ಗುಜರಾತ್ ಸರ್ಕಾರ ಬಿಡುಗಡೆ ಮಾಡಿರುವ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲು ಕೋಲ್ಕತ್ತಾದಲ್ಲಿ ಟಿಎಂಸಿ 48 ಗಂಟೆಗಳ ಸುದೀರ್ಘ ಧರಣಿಯನ್ನು ಆಯೋಜಿಸಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


