2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್ ಒನ್
ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2021ರಲ್ಲಿ ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಕೋವಿಡ್-19 ಸಾಂಕ್ರಾಮಿಕ...

ನವದೆಹಲಿ: ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2021ರಲ್ಲಿ ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಕೋವಿಡ್-19 ಸಾಂಕ್ರಾಮಿಕ ವರ್ಷದಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ)ದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ದೇಶಾದ್ಯಂತ ಒಟ್ಟು 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
"ಕಳೆದ ವರ್ಷ ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ 37,751 ದಿನಗೂಲಿ ಕಾರ್ಮಿಕರು, 18,803 ಸ್ವಯಂ ಉದ್ಯೋಗಿಗಳು ಮತ್ತು 11,724 ನಿರುದ್ಯೋಗಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಹೇಳಿದೆ.
ಈ ಅವಧಿಯಲ್ಲಿ ದೇಶದಲ್ಲಿ ಒಟ್ಟು 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2021 ರಲ್ಲಿ 5,318 ರೈತರು ಮತ್ತು 5,563 ಕೃಷಿ ಕಾರ್ಮಿಕರು ಸೇರಿದಂತೆ ಕೃಷಿ ವಲಯದಲ್ಲಿ ಒಟ್ಟು 10,881 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದೇಶದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ. 6.6 ರಷ್ಟಿದೆ.
2021ರಲ್ಲಿ ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವ ರಾಜ್ಯ ಮಹಾರಾಷ್ಟ್ರ. ಆತ್ಮಹತ್ಯೆ ಪ್ರಕರಣಗಳಲ್ಲಿ ತಮಿಳುನಾಡು ಮತ್ತು ಮಧ್ಯಪ್ರದೇಶ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಸುಸೈಡ್ ಪ್ರಕರಣದಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ.
2020 ರಲ್ಲಿ ಭಾರತದಲ್ಲಿ ಒಟ್ಟು 1,53,052 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಆದರೆ, 2021 ರಲ್ಲಿ ಒಟ್ಟು 1,64,033 ಪ್ರಕರಣಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಆತ್ಮಹತ್ಯೆ ಪ್ರಮಾಣ ಶೇ.6.2ರಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


