ದೇಶ

ಸೋಪೋರ್ ಎನ್ಕೌಂಟರ್: ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಇಂದು ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಸೋಪೋರ್ ಎನ್ಕೌಂಟರ್: ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!
ಎನ್ಕೌಂಟರ್
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಇಂದು ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿರುವುದಾಗಿ ಕಾಶ್ಮೀರ ಪೊಲೀಸರು ಬುಧವಾರ ಹೇಳಿದ್ದಾರೆ.

"ಸೋಪೋರ್‌ನ ಬೊಮೈ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಪ್ರಸ್ತುತ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!
ಇನ್ನು ಕಣಿವೆ ರಾಜ್ಯದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಿರಂತರವಾಗಿದ್ದು, ಕಳೆದ 48 ಗಂಟೆಗಳಲ್ಲಿ 5 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ನಿನ್ನೆಯಷ್ಟೇ ಶೋಪಿಯಾನ್‌ಗೆ ನಾಗಬಾಲ್ ಪ್ರದೇಶದಲ್ಲಿ ಅಡಗಿದ್ದ ಮೂರು ಮಂದಿ ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.