ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್; 6 ಮಂದಿ ದಾರುಣ ಸಾವು, 8 ಜನರಿಗೆ ಗಂಭೀರ ಗಾಯ
ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ.
ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


