ಹಿಮಾಚಲದಲ್ಲಿ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ: ಕಾಂಗ್ರೆಸ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದ್ದು, "ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ರಾಜ್ಯದಲ್ಲಿ ನಾವು ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸುತ್ತೇವೆ. 'ಆಪರೇಷನ್ ಕಮಲ'ಕ್ಕೆ ಹೆದರುವುದಿಲ್ಲ...

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದ್ದು, "ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ರಾಜ್ಯದಲ್ಲಿ ನಾವು ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸುತ್ತೇವೆ. 'ಆಪರೇಷನ್ ಕಮಲ'ಕ್ಕೆ ಹೆದರುವುದಿಲ್ಲ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸಲಿದೆ ಎಂದು ರಾಜೀವ್ ಶುಕ್ಲಾ ಅವರು ತಿಳಿಸಿದ್ದಾರೆ.
"ಹಿಮಾಚಲ ಪ್ರದೇಶ ಫಲಿತಾಂಶ ಇತರ ರಾಜ್ಯಗಳಲ್ಲಿ ನಮ್ಮ ಪಕ್ಷದ ನೈತಿಕತೆ ಮತ್ತು ಪ್ರಭಾವವನ್ನು ಹೆಚ್ಚಿಸುತ್ತದೆ. ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢಕ್ಕೆ ಸಂದೇಶ ರವಾನೆಯಾಗಿದೆ" ಎಂದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ಅವರು ಹೇಳಿದ್ದಾರೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆದಿದ್ದು, ಶೇ.75.6ರಷ್ಟು ಮತದಾನವಾಗಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 40 ರಲ್ಲಿ ಹಾಗೂ ಬಿಜೆಪಿ 25ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಬಹುಮತಕ್ಕೆ 35 ಶಾಸಕರ ಅಗತ್ಯ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


