ಎಎಪಿಯವರು ದೆಹಲಿ ಮೇಯರ್ ಆಗುತ್ತಾರೆ: ಬಿಜೆಪಿ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಆಮ್ ಆದ್ಮಿ ಪಕ್ಷದವರು ಮುಂದಿನ ದೆಹಲಿ ಮೇಯರ್ ಆಗಲಿದ್ದಾರೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಆಮ್ ಆದ್ಮಿ ಪಕ್ಷದವರು ಮುಂದಿನ ದೆಹಲಿ ಮೇಯರ್ ಆಗಲಿದ್ದಾರೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.
"ಎಂಸಿಡಿಯಲ್ಲಿ ಬಿಜೆಪಿ ಪ್ರಬಲ ಪ್ರತಿಪಕ್ಷದ ಪಾತ್ರವನ್ನು ನಿರ್ವಹಿಸುತ್ತದೆ" ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಇಂದು ಎನ್ಡಿಟಿವಿಗೆ ತಿಳಿಸಿದ್ದಾರೆ.
ತಮ್ಮ ಪಕ್ಷವು ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಎಂಸಿಡಿಯ "ಕಾವಲುಗಾರ"ನಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.
ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದಿರಬಹುದು. ಆದರೆ ಮುಂದೆ ಮೇಯರ್ ಚುನಾವಣೆ ಇದೆ ಎಂದು ಹೇಳುವ ಮೂಲಕ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿತ್ತು.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಎಎಪಿ 134 ವಾರ್ಡ್ಗಳನ್ನು ಗೆಲ್ಲುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


