182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಖೇಡವಾಲಾ ಏಕೈಕ ಮುಸ್ಲಿಂ ಶಾಸಕ
ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.

ಅಹಮದಾಬಾದ್: ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನ ಇಮ್ರಾನ್ ಖೇಡವಾಲಾ ಅವರು ಈಗಷ್ಟೇ ಮುಗಿದ ಚುನಾವಣೆಯಲ್ಲಿ ಆಯ್ಕೆಯಾದ ಏಕೈಕ ಮುಸ್ಲಿಂ ಶಾಸಕರಾಗಿದ್ದಾರೆ.
ಕಳೆದ ವಿಧಾನಸಭೆಯಲ್ಲಿ ಮೂವರು ಮುಸ್ಲಿಂ ಶಾಸಕರಿದ್ದರು ಮತ್ತು ಅವರೆಲ್ಲರೂ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು.
ಅಹಮದಾಬಾದ್ ನಗರದ ಜಮಾಲ್‌ಪುರ್-ಖಾಡಿಯಾ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಖೇಡವಾಲಾ ಅವರು 13,658 ಮತಗಳ ಅಂತರದಿಂದ ಗೆದ್ದು ಶಾಸಕ ಸ್ಥಾನ ಉಳಿಸಿಕೊಂಡಿದ್ದಾರೆ.
ಖೇಡವಾಲಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಭೂಷಣ್ ಭಟ್ ಅವರನ್ನು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರದಲ್ಲಿ ಸೋಲಿಸಿದರು, ಅಲ್ಲಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಸಬೀರ್ ಕಬ್ಲಿವಾಲಾ ಕೂಡ ಕಣದಲ್ಲಿದ್ದರು.
ಮೂವರು ಹಾಲಿ ಶಾಸಕರು ಸೇರಿದಂತೆ ಒಟ್ಟು ಆರು ಮುಸ್ಲಿಂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಈ ಪೈಕಿ ಇಬ್ಬರು ಶಾಸಕರು ಸೇರಿದಂತೆ ಐವರು ಅಭ್ಯರ್ಥಿಗಳು ಸೋತಿದ್ದಾರೆ.
2017 ರಲ್ಲಿ, ಪ್ರಮುಖ ವಿರೋಧ ಪಕ್ಷದಿಂದ ಕಣಕ್ಕಿಳಿದ ಅಲ್ಪಸಂಖ್ಯಾತ ಸಮುದಾಯದ ಐದು ಅಭ್ಯರ್ಥಿಗಳಲ್ಲಿ ಮೂವರು ವಿಜಯಶಾಲಿಯಾಗಿದ್ದರು. ಗುಜರಾತ್‌ನಲ್ಲಿ ಒಟ್ಟು ಜನಸಂಖ್ಯೆಯ ಸುಮಾರು ಶೇ. 10 ರಷ್ಟು ಮುಸ್ಲಿಮರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


