ಐಐಟಿ ಗುವಾಹಟಿ ಪ್ರಾಧ್ಯಾಪಕ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆ
ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ) ಪ್ರಾಧ್ಯಾಪಕರೊಬ್ಬರು ಶುಕ್ರವಾರ ಸಂಜೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಗುವಾಹಟಿ: ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ) ಪ್ರಾಧ್ಯಾಪಕರೊಬ್ಬರು ಶುಕ್ರವಾರ ಸಂಜೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು, ಮೃತರನ್ನು 47 ವರ್ಷದ ಗಣಿತಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿದೆ.
“ಇಂದು ಸಂಜೆ ಐಐಟಿ ಗುವಾಹಟಿಯ ನಿವಾಸವೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದನ್ನು ಸಂಸ್ಥೆಯ ಪ್ರಾಧ್ಯಾಪಕರು ಎಂದು ಗುರುತಿಸಲಾಗಿದೆ. ಮೃತರ ಕುಟುಂಬದೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಸಂಸ್ಥೆ ಪ್ರಯತ್ನಿಸುತ್ತಿದೆ ಎಂದು ಐಐಟಿ ಗುವಾಹಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿಗೆ ಸಂತಾಪ ಸೂಚಿಸಿರುವ ಸಂಸ್ಥೆ, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ಹೇಳಿದೆ. ಅಲ್ಲದೆ ಆಂತರಿಕ ತನಿಖೆಯನ್ನು ನಡೆಸಲು ನಿರ್ಧರಿಸಿದೆ.
ಮೃತರ ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದವರು ದೂರು ನೀಡಿದ ನಂತರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಅವರ ಮನೆಯ ಬಾಗಿಲು ಒಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


