ದೇಶ

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ: ಮೂವರು ಪೊಲೀಸರ ವಶಕ್ಕೆ

ಮಹಾತ್ಮಾ ಪುಲೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಎರಚಿದ ಘಟನೆ ಶನಿವಾರ ನಡೆದಿದೆ.

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ: ಮೂವರು ಪೊಲೀಸರ ವಶಕ್ಕೆ
ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಬಳಿಯುತ್ತಿರುವುದು.
Published On :

ಬೆಳಗಾವಿ: ಮಹಾತ್ಮಾ ಪುಲೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಎರಚಿದ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಇದರಿಂದ ಕೋಪಗೊಂಡಿದ್ದ ವಿವಿಧ ಪಕ್ಷಗಳು ನಿನ್ನೆ ಬೆಳಗ್ಗೆ ಪಿಂಪ್ರಿ ಡಾ. ಬಾಬಾ ಸಾಹೇಬ್​ ಅಂಬೇಡ್ಕರ್​ ಚೌಕ್​ನಲ್ಲಿ ಪ್ರತಿಭಟನೆ ನಡೆಸಿದ್ದರು.

ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಚಂದ್ರಕಾಂತ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಈ ಪ್ರತಿಭಟನೆಯಲ್ಲಿದ್ದ ಯುವಕನೋರ್ವ ಪಕ್ಕದಲ್ಲೇ ಬೆಂಗಾವಲು ಸಿಬ್ಬಂದಿಯಿದ್ದರೂ ಚಂದ್ರಕಾಂತ ಪಾಟೀಲರ ಮುಖಕ್ಕೆ ಮಸಿ ಎರಚಿ ಪರಾರಿಯಾಗಲು ಯತ್ನಿಸಿದ್ದ.

ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯುವಕ ಹಾಗೂ ಪ್ರತಿಭಟನೆಯಲ್ಲಿದ್ದು ಕೃತ್ಯದಲ್ಲಿ ಜೊತೆಗಿದ್ದ ಇನ್ನಿಬ್ಬರನ್ನು ವಶಕ್ಕೆ ಪಡೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.