ಮೇಘಾಲಯದ ಆಡಳಿತಾರೂಢ ಎನ್ ಪಿಪಿಯ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆ
ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ)ಯ ಇಬ್ಬರು ಶಾಸಕರು ಸೇರಿದಂತೆ ನಾಲ್ವರು ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ಕೇಸರಿ ಪಕ್ಷ ಈಶಾನ್ಯ ಪ್ರದೇಶದಲ್ಲಿ...

ನವದೆಹಲಿ: ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ)ಯ ಇಬ್ಬರು ಶಾಸಕರು ಸೇರಿದಂತೆ ನಾಲ್ವರು ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ಕೇಸರಿ ಪಕ್ಷ ಈಶಾನ್ಯ ಪ್ರದೇಶದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲು ಯತ್ನಿಸುತ್ತಿದೆ.
ನಾಲ್ಕು "ಅನುಭವಿ ಮತ್ತು ಗೌರವಾನ್ವಿತ" ರಾಜಕೀಯ ವ್ಯಕ್ತಿಗಳ ಸೇರ್ಪಡೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ ಎಂದು ಈಶಾನ್ಯ ಪ್ರದೇಶದ ಬಿಜೆಪಿ ಪ್ರಮುಖ ನಾಯಕರಾದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.
2018ರ ಚುನಾವಣೆಯಲ್ಲಿ 60 ಸದಸ್ಯ ಬಲದ ಮೇಘಾಲಯದಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆದ್ದಿದೆ.
ರಾಜ್ಯದ ಆಡಳಿತಾರೂಢ ಎನ್ಪಿಪಿ ಬಿಜೆಪಿ ಎನ್ ಡಿಎ ಸದಸ್ಯನಾಗಿದ್ದರೂ, ಅದರಿಂದ ಅಂತರ ಕಾಯ್ದುಕೊಂಡಿದೆ.
ಎನ್ ಪಿಪಿ ಶಾಸಕರಾದ ಬೆನೆಡಿಕ್ಟ್ ಮಾರಾಕ್ ಮತ್ತು ಫೆರ್ಲಿನ್ ಸಂಗ್ಮಾ, ಪಕ್ಷೇತರ ಶಾಸಕ ಸ್ಯಾಮ್ಯುಯೆಲ್ ಎಂ ಸಂಗ್ಮಾ ಮತ್ತು ತೃಣಮೂಲ ಕಾಂಗ್ರೆಸ್ನ ಹಿಮಾಲಯ ಮುಕ್ತನ್ ಶಾಂಗ್ಪ್ಲಿಯಾಂಗ್ ಅವರು ಇಂದು ಬಿಜೆಪಿ ಪ್ರಧಾನ ಕಛೇರಿಯಲ್ಲಿ ಕೇಸರಿ ಪಕ್ಷ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


