ನೀನು ಕುಡಿದರೆ ನೀನೇ ಸಾಯುತ್ತೀಯಾ: ನಕಲಿ ಮದ್ಯ ದುರಂತಕ್ಕೆ ಬಿಹಾರ ಸಿಎಂ ಬೇಸರ
ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

ಓಟ್ನಾ: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಮದ್ಯ ನಿಷೇಧವನ್ನು ಸಮರ್ಥಿಸಿಕೊಂಡ ನಿತೀಶ್ ಕುಮಾರ್, ರಾಜ್ಯದಲ್ಲಿ ಮದ್ಯ ನಿಷೇಧ ನೀತಿಯಿಂದ ಹಲವು ಜನರಿಗೆ ಪ್ರಯೋಜನವಾಗಿದೆ. ತಮ್ಮ ಕ್ರಮದಿಂದ ಹೆಚ್ಚು ಜನ ಮದ್ಯಪಾನವನ್ನು ತ್ಯಜಿಸಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: ಬಿಹಾರ: ನಕಲಿ ಮದ್ಯ ಸೇವನೆ, ಮೃತರ ಸಂಖ್ಯೆ 39ಕ್ಕೆ ಏರಿಕೆ
"ಮದ್ಯ ನಿಷೇಧದಿಂದ ಹಲವಾರು ಜನರಿಗೆ ಲಾಭವಾಗಿದೆ. ಹೆಚ್ಚಿನ ಸಂಖ್ಯೆಯ ಜನರು ಮದ್ಯವನ್ನು ತ್ಯಜಿಸಿದ್ದಾರೆ... ಇದು ಒಳ್ಳೆಯದು. ಹಲವಾರು ಜನ ಇದನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಆದರೆ ಕೆಲವರು ಮಾತ್ರ ತೊಂದರೆ ಕೊಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಬಂಧಿಸುವಂತೆ ನಾನು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
"ಮದ್ಯೆ ಸೇವಿಸುವ ಬಡವರನ್ನು ಬಂಧಿಸಬೇಡಿ ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಆದರೆ ಮದ್ಯವನ್ನು ತಯಾರಿಸುವ ಮತ್ತು ಮದ್ಯದ ವ್ಯಾಪಾರವನ್ನು ನಡೆಸುವ ಜನರನ್ನು ಬಂಧಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


