ಬಲವಂತದ ಮತಾಂತರ ಭಾರತದ ಭದ್ರತೆಗೆ ಗಂಭೀರ ಬೆದರಿಕೆ: ಕೇಂದ್ರ ಗೃಹ ಅಮಿತ್ ಶಾ
ಬಲವಂತದ ಮತಾಂತರದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವರು ಇದು ದೇಶದ ಭದ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.

ನವದೆಹಲಿ: ಬಲವಂತದ ಮತಾಂತರದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವರು ಇದು ದೇಶದ ಭದ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ತಿನಲ್ಲಿ ಮಾತನಾಡಿದ್ದು ಮಾರ್ಗಸೂಚಿಗಳನ್ನು ಅನುಸರಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಲವಂತದ ಮತಾಂತರಗಳು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಅಂತಹ ಯಾವುದೇ ಚಟುವಟಿಕೆಗಳನ್ನು ಉತ್ತೇಜಿಸುವುದಿಲ್ಲ ಎಂದು ಅಮಿತ್ ಶಾ ಹೇಳಿದರು.
ಹಿಂದಿನ ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಬಲವಂತದ ಮತಾಂತರದ ಘಟನೆಗಳನ್ನು ತಡೆಯಲು ಅದು ಸಾಕಷ್ಟು ಕ್ರಮಗಳನ್ನ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದರು. ಏತನ್ಮಧ್ಯೆ, ಈ ವಿಷಯದ ಬಗ್ಗೆ ರಾಜಕೀಯ ಚೆರ್ಚೆಗಳು ಶೀಘ್ರದಲ್ಲೇ ಸ್ಫೋಟಗೊಳ್ಳುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


