ಸದ್ಯಕ್ಕೆ ಭಾರತದಲ್ಲಿ ಕೋವಿಡ್ ಉಲ್ಬಣವಾಗುವ ಸಾಧ್ಯತೆ ಇಲ್ಲ: ವೈರಾಲಜಿಸ್ಟ್ ಡಾ. ಕಂಗ್
ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ವಿಶ್ವವನ್ನೇ ತಲ್ಲಣಗೊಳಿಸಿವೆ. ಆದರೆ ಭಾರತದಲ್ಲಿ ಈ ಉಪ ತಳಿಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ

ನವದೆಹಲಿ: ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ವಿಶ್ವವನ್ನೇ ತಲ್ಲಣಗೊಳಿಸಿವೆ. ಆದರೆ ಭಾರತದಲ್ಲಿ ಈ ಉಪ ತಳಿಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.
ಈಗಾಗಲೇ ಬಿಎಫ್.7ನ ಕೆಲವು ಪ್ರಕರಣಗಳು ಭಾರತಗಲ್ಲಿ ವರದಿಯಾಗಿವೆ. ಆದರೆ ಅವುಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ. ಹೀಗಾಗಿ ಸದ್ಯಕ್ಕೆ ಭಾರತದಲ್ಲಿ ಕೊರೋನಾ ಉಲ್ಬಣವಾಗುತ್ತದೆ ಎಂದು ನಿರೀಕ್ಷಿಸಬೇಡಿ ಎಂದು ಖ್ಯಾತ ವೈರಾಲಜಿಸ್ಟ್ ಗಂಗನ್‌ದೀಪ್ ಕಂಗ್ ಅವರು ಶುಕ್ರವಾರ ಹೇಳಿದ್ದಾರೆ.
BF.7, ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೋನಾ ವೈರಸ್ ಭಾರೀ ಪ್ರಮಾಣದಲ್ಲಿ ಹರಡುವಂತೆ ಮಾಡಿದ್ದು, ಇದರಿಂದ ಆತಂಕಗೊಂಡಿರುವ ಭಾರತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಆರಂಭಿಸಿದೆ.
"XBB ಹಾಗೂ BF.7 ಸಹ ಓಮಿಕ್ರಾನ್ ನ ಉಪ ತಳಿಗಳು. ಈ ರೂಪಾಂತರಿ ಡೆಲ್ಟಾಕ್ಕಿಂತ ಹೆಚ್ಚು ತೀವ್ರವಾದ ರೋಗವನ್ನು ಉಂಟುಮಾಡುವುದಿಲ್ಲ" ಎಂದು ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜಿನ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ.ಕಂಗ್ ಅವರು ಟ್ವೀಟ್ ಮಾಡಿದ್ದಾರೆ.
"ಈ ಸಮಯದಲ್ಲಿ, ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದು ಕಂಗ್ ಹೇಳಿದ್ದಾರೆ. ಆದರೆ "ವೈರಸ್‌ನ ನಡವಳಿಕೆಯಲ್ಲಿನ ಬದಲಾವಣೆಯ ಸೂಚನೆಯನ್ನು ಪತ್ತೆಹಚ್ಚಲು" ಕಣ್ಗಾವಲು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


