ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್ ಗೆ ಶುಭ ಕೋರಿದ ಉದ್ಧವ್ ಠಾಕ್ರೆ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಪಢ್ನವಿಸ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ...

ಮುಂಬೈ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಪಢ್ನವಿಸ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
"ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಶುಭಾಶಯಗಳು. ನೀವು ಮಹಾರಾಷ್ಟ್ರಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ" ಎಂದು ಉದ್ಧವ್ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.
ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಇಂದು ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಹತ್ತು ದಿನಗಳ ರಾಜಕೀಯ ಬಿಕ್ಕಟ್ಟಿಗೆ ನಾಟಕೀಯ ತೆರೆ ಬಿದ್ದಿದೆ.
ಇದನ್ನು ಓದಿ: ಜುಲೈ 2, 3 ರಂದು ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ
ರಾಜಭವನದಲ್ಲಿ ಇಂದು 7.30ಕ್ಕೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ನೂತನ ಸಿಎಂ ಮತ್ತು ಡಿಸಿಎಂಗೆ ಪ್ರಮಾಣವಚನ ಬೋಧಿಸಿದರು. ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅವರನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರದ ಜನತೆ ಮತ್ತು ಶಿವಸೇನೆಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


