ಆದಿತ್ಯ ಠಾಕ್ರೆ ವಿರುದ್ಧ ಕ್ರಮವಿಲ್ಲ: ಉದ್ಧವ್ ಪುತ್ರನೆಡೆಗೆ ಶಿಂಧೆ ಕ್ಯಾಂಪ್ ಮೃದು ಧೋರಣೆ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬಳಿಕ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಬಣ, ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ನೊಟೀಸ್ ಜಾರಿಗೊಳಿಸಿದೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬಳಿಕ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಬಣ, ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ನೊಟೀಸ್ ಜಾರಿಗೊಳಿಸಿದೆ.
ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ನೊಟೀಸ್ ನಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಪುತ್ರನ ಹೆಸರನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವನ್ನೂ ಶಿಂಧೆ ಬಣ ನೀಡಿದ್ದು, ಗೌರವ ನೀಡಿ ಆದಿತ್ಯ ಠಾಕ್ರೆ ಅವರ ಹೆಸರನ್ನು ನೊಟೀಸ್ ನಿಂದ ಕೈಬಿಡಲಾಗಿದೆ ಎಂದು ಶಿಂಧೆ ಬೆಂಬಲಿಗ ಭರತ್ ಗೊಗವಾಲೆ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಬಣದಲ್ಲಿರುವ ಶಾಸಕರೂ ಸೇರಿದಂತೆ ಶಿವಸೇನೆಯ ಎಲ್ಲಾ ಶಾಸಕರೂ ಉದ್ಧವ್ ಹಾಗೂ ಆದಿತ್ಯ ಠಾಕ್ರೆ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡಿದ್ದೇವೆ, ನಾವು ಅವರಿಗೆ ಗೌರವ ನೀಡುತ್ತೇವೆ ಆದರೆ ಅವರು ನಮ್ಮ ಸಮಸ್ಯೆಗಳನ್ನು ನಿವಾರಿಸಬೇಕಿತ್ತು ಎಂದು ಭರತ್ ಗೊಗವಾಲೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


