ಪಶ್ಚಿಮ ಬಂಗಾಳ: ಮೂವರು ಟಿಎಂಸಿ ಕಾರ್ಯಕರ್ತರ ಗುಂಡಿಕ್ಕಿ ಹತ್ಯೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪಶ್ಚಿಮ ಬಂಗಾಳದ ಆಡಳಿತ ಪಕ್ಷದ ಗೋಪಾಲ್‌ಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಬೆಳಗ್ಗೆ 9 ಗಂಟೆ ಸುಮಾರಿಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಾರಿಯಾಗುತ್ತಿದ್ದಾಗ ಹಂತಕರು ಟಿಎಂಸಿ ನಾಯಕನ ಜೊತೆ ಇದ್ದ ಇಬ್ಬರು ಕಾರ್ಯಕರ್ತರ ಮೇಲೂ ಗುಂಡು ಹಾರಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ ಜನನಿಬಿಡ ರಸ್ತೆಯಲ್ಲಿ ಮೋಟಾರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಮೊದಲು ಮಾಝಿಗೆ ಗುಂಡು ಹಾರಿಸಿದರು. ಆತನಿಗೆ ಗುಂಡು ಹಾರಿಸಿರುವುದನ್ನು ನೋಡಿದ ಇತರ ಇಬ್ಬರು ಓಡಿಹೋಗಲು ಪ್ರಾರಂಭಿಸಿದರು. ಆದರೆ ದಾಳಿಕೋರರು ಹಿಂಬದಿಯಿಂದ ಅವರ ಮೇಲೂ ಗುಂಡು ಹಾರಿಸಿದರು. ಮೂವರ ಮೇಲೆ ಗುಂಡು ಹಾರಿಸಿದ ನಂತರ ಚಾಕುವಿನಿಂದ ಹಲ್ಲೆ ಮಾಡಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಭೀಕರ ಗುಂಡಿನ ದಾಳಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


