ದೇಶ

ಮುಂಬರುವ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ: ಏಕನಾಥ್ ಶಿಂಧೆ

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ: ಏಕನಾಥ್ ಶಿಂಧೆ
ಏಕನಾಥ್ ಶಿಂಧೆ
Published On :

ಮುಂಬಯಿ: ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಶುಕ್ರವಾರ ತಮ್ಮ ಶಾಸಕರ ಗುಂಪು ಏಕನಾಥ್ ಶಿಂಧೆ ಅವರನ್ನು ಸನ್ಮಾನಿಸಲಾಯಿತು, ಈ ವೇಳೆ 50 ಶಾಸಕರು ತಮ್ಮನ್ನು ಬೆಂಬಲಿಸಲು ತೆಗೆದುಕೊಂಡ ರಿಸ್ಕ್ ಬಗ್ಗೆ ಮಾತನಾಡಿದರು. ಈ ಎಲ್ಲಾ ಶಾಸಕರ ಆಗು ಹೋಗುಗಳ ಬಗ್ಗೆ ಗಮನ ಹರಿಸುವುದು ತಮ್ಮ ಕರ್ತವ್ಯ, ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಸಮಯನೀಡುತ್ತೇನೆ.

ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50 ಶಾಸಕರು ಈಗ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಜನರು ಹೇಳುತ್ತಾರೆ. ಆದರೆ ಒಬ್ಬ ಶಾಸಕ ಚುನಾವಣೆಯಲ್ಲಿ ಸೋತರೂ, ನಾನು ಶಾಶ್ವತವಾಗಿ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.

ಆರಂಭದಲ್ಲಿ ಕೆಲವೇ ಶಾಸಕರು ನಮ್ಮೊಂದಿಗಿದ್ದರು, ನಂತರ 50 ಮಂದಿ ಇದ್ದರು. ನಮ್ಮ ವಿರುದ್ಧ ಇದ್ದವರು ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದರು. ಆದರೆ ಅವರ ಡರ್ಟಿ ಗೇಮ್ ಗೆ ಯಾರೋಬ್ಬರು ಬೆಂಬಲ ನೀಡಲಿಲ್ಲ. ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿರ್ಧಾರವನ್ನು ಜನರು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

“ಸೂರತ್ ಮತ್ತು ಗುವಾಹಟಿಯಲ್ಲಿ ಇಷ್ಟು ದಿನ ನಿದ್ದೆ ಬರಲಿಲ್ಲ. ನಾನು 1.00 ಗಂಟೆಗೆ ಮಲಗುತ್ತಿದ್ದೆ ಮತ್ತು ಬೆಳಗ್ಗೆ 3 ಗಂಟೆಗೆ ಎದ್ದೇಳುತ್ತಿದ್ದೆ.  ಇದು ನನ್ನ ಜೀವನದಲ್ಲಿ ಒಂದು ಅತಿ ನಿರ್ಣಾಯಕ ಕ್ಷಣವಾಗಿತ್ತು. ನಾನು ನನ್ನ ಭವಿಷ್ಯದ ಬಗ್ಗೆ ಚಿಂತಿಸಲಿಲ್ಲ ಆದರೆ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ನನ್ನೊಂದಿಗೆ ಬಂದಿದ್ದ 50 ಶಾಸಕರ ಭವಿಷ್ಯದ ಬಗ್ಗೆ ನನಗೆ ಕಾಳಜಿ ಇತ್ತು. ಅವರು ನನ್ನ ನಾಯಕತ್ವದಲ್ಲಿ ವಿಶ್ವಾಸ ತೋರಿಸಿದರು ಎಂದು ಶಿಂಧೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇನಾ ಶಾಸಕರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ. ಎನ್ ಸಿಪಿ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ನಾನು ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಯಾರೊಬ್ಬರು ಸಮಸ್ಯೆ ನೀಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.