ರಾಜಕೀಯ ವಿರೋಧವು ಹಗೆತನಕ್ಕೆ ಬದಲಾಗುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ: ಸಿಜೆಐ ರಮಣ
ರಾಜಕೀಯ ವಿರೋಧವು ಹಗೆತನಕ್ಕೆ ಬದಲಾಗುತ್ತಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಶನಿವಾರ ಹೇಳಿದ್ದಾರೆ.

ಜೈಪುರ: ರಾಜಕೀಯ ವಿರೋಧವು ಹಗೆತನಕ್ಕೆ ಬದಲಾಗುತ್ತಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಶನಿವಾರ ಹೇಳಿದ್ದಾರೆ.
ರಾಜಸ್ಥಾನ ವಿಧಾನಸಭೆಯಲ್ಲಿ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಗೌರವವು ಕಡಿಮೆಯಾಗುತ್ತಿದೆ ಎಂದು ರಮಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
'ರಾಜಕೀಯ ವಿರೋಧವು ಹಗೆತನಕ್ಕೆ ಪರಿವರ್ತಿತವಾಗಬಾರದು. ಇದನ್ನು ನಾವು ಇತ್ತೀಚಿನ ದಿನಗಳಲ್ಲಿ ನೋಡುವಂತಾಗಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳಲ್ಲ ಎಂದು ರಮಣ ಹೇಳಿದರು.
ಬೇಸರದ ಸಂಗತಿಯೆಂದರೆ, ದೇಶದಲ್ಲಿ ಶಾಸಕಾಂಗ ಕಾರ್ಯಕ್ಷಮತೆಯ ಗುಣಮಟ್ಟದಲ್ಲಿ ಕುಸಿತ ಕಾಣುತ್ತಿದೆ. ವಿವರವಾದ ಚರ್ಚೆಗಳು ಮತ್ತು ಪರಿಶೀಲನೆಗಳಿಲ್ಲದೆ ಕಾನೂನುಗಳನ್ನು ಅಂಗೀಕರಿಸಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


