ದೇಶ

ಕೋವಿಡ್-19: ದೇಶದಲ್ಲಿ 20,557 ಹೊಸ ಪ್ರಕರಣ, 40 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20 ಸಾವಿರದ 557 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಹಾಗೂ 40 ಮಂದಿ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 18 ಸಾವಿರದ 517 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್-19: ದೇಶದಲ್ಲಿ 20,557 ಹೊಸ ಪ್ರಕರಣ, 40 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20 ಸಾವಿರದ 557 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಹಾಗೂ 40 ಮಂದಿ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 18 ಸಾವಿರದ 517 ಮಂದಿ ಗುಣಮುಖರಾಗಿದ್ದಾರೆ. 

ಈ ಮೂಲಕ ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದಿದವರ ಸಂಖ್ಯೆ 4 ಕೋಟಿಯ 31 ಲಕ್ಷದ 32 ಸಾವಿರದ 140 ಆಗಿದೆ. ಕೋವಿಡ್ ಸೋಂಕು ಕಾಣಿಸಿಕೊಂಡ ನಂತರ ಇದುವರೆಗೆ 5 ಲಕ್ಷದ 25 ಸಾವಿರದ 825 ಮಂದಿ ಮೃತಪಟ್ಟಿದ್ದಾರೆ. ದಿನಂಪ್ರತಿ ಪಾಸಿಟಿವ್ ಪ್ರಮಾಣ ಶೇಕಡಾ 4.13ರಷ್ಟಿದೆ. ಸಕ್ರಿಯ ಸೋಂಕಿತರು 1 ಲಕ್ಷದ 45 ಸಾವಿರದ 654 ಆಗಿದ್ದಾರೆ. 

ಕೋವಿಡ್ ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಇಲ್ಲಿಯವರೆಗೆ 200 ಕೋಟಿಯ 61 ಲಕ್ಷದ 24 ಸಾವಿರದ 684  ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 26 ಲಕ್ಷದ 04 ಸಾವಿರದ 797 ಡೋಸ್ ಗಳನ್ನು ವಿತರಿಸಲಾಗಿದೆ. ಇದುವರೆಗೆ 87.06 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು ಕಳೆದ 24 ಗಂಟೆಗಳಲ್ಲಿ 4 ಲಕ್ಷದ 98 ಸಾವಿರದ 034 ಮಂದಿಗೆ ಪರೀಕ್ಷೆ ನಡೆಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.