ಯೂಟ್ಯೂಬ್ ವೀಕ್ಷಕರ ಪ್ರಮಾಣ ಕುಸಿಯಿತೆಂದು ಆತ್ಮಹತ್ಯೆ ಮಾಡಿಕೊಂಡ ಭೂಪ!
ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್: ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 23 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಯೂಟ್ಯೂಬ್ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್ ಐಐಟಿಎಂ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ವಾಲಿಯರ್ ಮೂಲದ ವಿದ್ಯಾರ್ಥಿ ಇಂದು ಬೆಳಿಗ್ಗೆ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಬಿದ್ದ ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ರವಾನಿಸಲು ಪ್ರಯತ್ನಿಸಿದರೂ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಯು ಬರೆದಿರುವ ಸೂಸೈಡ್ ನೋಟ್‌ನಲ್ಲಿ, ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾಗಿದ್ದಾರೆ ಮತ್ತು ಅವರ ಪೋಷಕರು ತಮ್ಮ ವೃತ್ತಿಜೀವನದಲ್ಲಿ ತನಗೆ ಮಾರ್ಗದರ್ಶನ ನೀಡುತ್ತಿಲ್ಲ, ಇದರಿಂದಾಗಿ ತಾನು ತೊಂದರೆಗೀಡಾದೆ ಎಂದು ಮೃತ ವಿದ್ಯಾರ್ಥಿ ನೋವು ತೋಡಿಕೊಂಡಿದ್ದಾನೆ ಎಂದು ಸೈದಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿ ವ್ಯಾಸಂಗ ಮಾಡುತ್ತಿದ್ದ. ಪ್ರಸ್ತುತ ತಮ್ಮ ಕೋರ್ಸ್‌ಗಾಗಿ ಆನ್‌ಲೈನ್ ತರಗತಿಗಳ ಮೂಲಕ ಅಧ್ಯಯನ ಮಾಡುತ್ತಿದ್ದ. ವಿದ್ಯಾರ್ಥಿಯು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋ-ಗೇಮ್‌ಗಳ ವಿಷಯವನ್ನು ಅಪ್‌ಲೋಡ್ ಮಾಡುತ್ತಿದ್ದ. ಪ್ರಸ್ತುತ ಆತ್ಮಹತ್ಯೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


