ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಎರಡು ಇಡಿ ವಶಕ್ಕೆ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.

ಕೋಲ್ಕತ್ತಾ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.
ಪಶ್ಚಿಮ ಬಂಗಾಳದ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಇಡಿ ಸುಮಾರು 26 ಗಂಟೆಗಳ ಕಾಲ ವಿಚಾರಣೆ ಬಳಿಕ ಬಂಧಿಸಿದ್ದು, ಬಳಿಕ ಬ್ಯಾಂಕ್ ಶಾಲ್ ಕೋರ್ಟ್ ಮುಂದೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಸಚಿವರನ್ನು ಎರಡು ದಿನ ಇಡಿ ವಶಕ್ಕೆ ನೀಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಇಂದು ರಜೆ ಇದ್ದ ಕಾರಣ ಆರೋಪಿಯನ್ನು ಬ್ಯಾಂಕ್ ಶಾಲ್ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರಿದ ಇಬ್ಬರು ಸಚಿವರು ಸೇರಿದಂತೆ ಸುಮಾರು ಹನ್ನೆರಡು ಜನರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿತು. ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಸಂಜೆ ದಾಳಿ ನಡೆಸಿದ್ದು, ಸುಮಾರು 20 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


