ದೇಶ

ಶಿಕ್ಷಕರ ನೇಮಕಾತಿ ಹಗರಣ: ಇಡಿಯಿಂದ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ, ಸಹಚರೆ ಅರ್ಪಿತಾ ಮುಖರ್ಜಿ ಬಂಧನ

ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಬಂಧಿಸಿದೆ. ಹಗರಣ ನಡೆದಾಗ ರಾಜ್ಯ ಶಿಕ್ಷಣ ಸಚಿವರಾಗಿದ್ದ ಚಟರ್ಜಿ ಅವರನ್ನು ಸುಮಾರು 26 ಗಂಟೆಗಳ ಕಾಲ ತೀವ್ರ ತನಿಖೆಯ ನಂತರ ಇಂದು ಬಂಧಿಸಲಾಗಿದೆ.

ಶಿಕ್ಷಕರ ನೇಮಕಾತಿ ಹಗರಣ: ಇಡಿಯಿಂದ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ, ಸಹಚರೆ ಅರ್ಪಿತಾ ಮುಖರ್ಜಿ ಬಂಧನ
ಶಾಲಾ ಸೇವಾ ಆಯೋಗದ (SSC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಪಾರ್ಥ ಚಟರ್ಜಿಗೆ ಸೇರಿದ ಆಸ್ತಿಯ ಮೇಲೆ ಇಡಿ ದಾಳಿ ನಡೆಸುತ್ತಿರುವಾಗ ಪೊಲೀಸ್ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ.
Published On :

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದ (SSC scam) ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ED) ಶನಿವಾರ ಬಂಧಿಸಿದೆ. ಹಗರಣ ನಡೆದಾಗ ರಾಜ್ಯ ಶಿಕ್ಷಣ ಸಚಿವರಾಗಿದ್ದ ಚಟರ್ಜಿ ಅವರನ್ನು ಸುಮಾರು 26 ಗಂಟೆಗಳ ಕಾಲ ತೀವ್ರ ತನಿಖೆಯ ನಂತರ ಇಂದು ಬಂಧಿಸಲಾಗಿದೆ.

ಪ್ರಸ್ತುತ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಕೈಗಾರಿಕೆ ಸಚಿವರಾಗಿರುವ ಚಟರ್ಜಿ ಅವರನ್ನು ಸಾಲ್ಟ್ ಲೇಕ್ ಪ್ರದೇಶದ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಇಡಿ ಕಚೇರಿಗೆ ಬಂಧಿಸಿ ಕರೆದೊಯ್ಯಲಾಯಿತು. ನಿನ್ನೆ ಬೆಳಗ್ಗೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳಿಗೆ ಚಟರ್ಜಿ ಸರಿಯಾಗಿ ಸಹಕರಿಸುತ್ತಿರಲಿಲ್ಲ. ಇಂದು ನ್ಯಾಯಾಲಯ ಮುಂದೆ ಅವರನ್ನು ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಇನ್ನು ಸಚಿವ ಚಟರ್ಜಿಯವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಬಳಿಯಿಂದ 21 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡ ನಂತರ ಅವರನ್ನು ಕೂಡ ಬಂಧಿಸಲಾಗಿದೆ. 

ನಿನ್ನೆ ಇಡಿ ಅಧಿಕಾರಿಗಳು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ತನಿಖೆ ನಡೆಸಿ ಸುಮಾರು 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ನಂತರ 12ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಅದರಲ್ಲಿ ಇಬ್ಬರು ಸಚಿವರು ಒಳಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.