ಕೋವಿಡ್-19: ದೇಶದಲ್ಲಿ 20,557 ಹೊಸ ಪ್ರಕರಣ ಪತ್ತೆ, 44 ಮಂದಿ ಸಾವು
ದೇಶದಲ್ಲಿಂದು ಕಳೆದ 24 ಗಂಟೆಗಳ ಅವಧಿಯಲ್ಲಿ 20,557 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳು ಕೂಡ ಜಾಸ್ತಿಯಾಗಿವೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20,557 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳು ಕೂಡ ಜಾಸ್ತಿಯಾಗಿದ್ದು, 1,46,323ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಇಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 44 ಜನರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 5,26,211ಕ್ಕೆ ಏರಿಕೆಯಾಗಿದೆ. ಒಟ್ಟು 4,32,86,787 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಸಚಿವಾಲಯದ ಪ್ರಕಾರ, ಲಸಿಕಾ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಈವರೆಗೆ 203.21 ಕೋಟಿ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 5.18ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 4.71ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


