ದೇಶ

ಉತ್ತರ ಪ್ರದೇಶ: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಮೂಹಿಕ ಅತ್ಯಾಚಾರವೆಸಗಿ ತ್ರಿವಳಿ ತಲಾಖ್ ನೀಡಿದ ಪತಿ!

ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿಗಳು ಅತ್ಯಾಚಾರವೆಸಗಿದ್ದಾರೆ. ನಂತರ 'ತ್ರಿವಳಿ ತಲಾಖ್' ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶ: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಮೂಹಿಕ ಅತ್ಯಾಚಾರವೆಸಗಿ ತ್ರಿವಳಿ ತಲಾಖ್ ನೀಡಿದ ಪತಿ!
ಪ್ರಾತಿನಿಧಿಕ ಚಿತ್ರ
Published On :

ಗೊಂಡಾ (ಉತ್ತರ ಪ್ರದೇಶ): ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿಗಳು ಅತ್ಯಾಚಾರವೆಸಗಿದ್ದಾರೆ. ನಂತರ 'ತ್ರಿವಳಿ ತಲಾಖ್' ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

ಆರೋಪಿ ಪತಿ, ಲಖನೌ ಮೂಲದ ಮೊಹಮ್ಮದ್ ಅದ್ನಾನ್ ಎಂಬಾತನನ್ನು ಗುರುವಾರ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಕ್ಷಿಣೆ ನೀಡಬೇಕೆಂದು ನನ್ನ ಪತಿ ಒತ್ತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನನ್ನನ್ನು ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

'ವರದಕ್ಷಿಣೆಗಾಗಿ ಆರೋಪಿಯು ನೀಡುತ್ತಿದ್ದ ಹಿಂಸೆಯಿಂದಾಗಿ ಮಹಿಳೆಯು ಆಕೆಯ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ, ಅದ್ನಾನ್ ಮತ್ತು ಆತನ ಸೋದರ ಸಂಬಂಧಿ ಮಹಿಳೆಯ ತಾಯಿ ಮನೆಗೆ ಬಂದಿದ್ದಾರೆ. ಈ ವೇಳೆ ಒಬ್ಬಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಆಕಾಶ್ ತೋಮರ್ ಹೇಳಿದ್ದಾರೆ.

ಇದಾದ ಬಳಿಕ ಅದ್ನಾನ್ ಆಕೆಯನ್ನು ಥಳಿಸಿದ್ದಾನೆ. ಅಲ್ಲದೆ, ಕಾನೂನುಬಾಹಿರವಾದ 'ತ್ರಿವಳಿ ತಲಾಖ್' ಮೂಲಕ ಮಹಿಳೆಗೆ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸೋದರ ಸಂಬಂಧಿಯ ಹುಡುಕಾಟ ನಡೆಯುತ್ತಿದೆ. 

Related Article

ನೊಯ್ಡಾದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಓಡಿಹೋಗಲು ಯತ್ನಿಸುತ್ತಿದ್ದ ಆರೋಪಿಗೆ ಗುಂಡೇಟು

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಾಸಕನ ಪುತ್ರ ಸೇರಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ

ಹೈದರಾಬಾದ್: ಅತ್ಯಾಚಾರ ಸಂತ್ರಸ್ತೆಯ ಫೋಟೋ ಬಿಡುಗಡೆ ಮಾಡಿದ್ದ ಬಿಜೆಪಿ ಶಾಸಕರ ವಿರುದ್ಧ ಕೇಸ್

ಹೈದರಾಬಾದ್: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ವಕ್ಫ್ ಮಂಡಳಿಯ ಹಿರಿಯ ಅಧಿಕಾರಿ ಪುತ್ರ ಸೇರಿ ಮತ್ತಿಬ್ಬರ ಬಂಧನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.