ಪಂಜಾಬ್: ಮಲೇರ್‌ಕೋಟ್ಲಾ ಎಎಪಿ ಮುನ್ಸಿಪಲ್ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ
ಪಂಜಾಬ್‌ನ ಮಲೇರ್‌ಕೋಟ್ಲಾ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡೀಗಢ: ಪಂಜಾಬ್‌ನ ಮಲೇರ್‌ಕೋಟ್ಲಾ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಕೌನ್ಸಿಲರ್ ನನ್ನು ಮೊಹಮ್ಮದ್ ಅಕ್ಬರ್ ಎಂದು ಗುರುತಿಸಲಾಗಿದ್ದು, ಅವರು ಜಿಮ್‌ನಲ್ಲಿದ್ದಾಗ ದುಷ್ಕರ್ಮಿಗಳು ಸಮೀಪದಿಂದಲೇ ಗುಂಡು ಹಾರಿಸಿದ್ದಾರೆ ಎಂದು ಮಲೇರ್‌ಕೋಟ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವನೀತ್ ಕೌರ್ ಸಿಧು ಅವರು ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಅಕ್ಬರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದುಷ್ಕರ್ಮಿಗಳು ಅಪರಾಧ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಕೋರರ ಪತ್ತೆಗೆ ಪ್ರಯತ್ನ ಮುಂದುವರಿದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಧು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


