ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ 95ರಿಂದ 92ಕ್ಕೆ ಕುಸಿತ; ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್
ಜೂನ್ 10 ರಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಂಸತ್ತಿನ ನಿರ್ಣಾಯಕ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ 95 ರಿಂದ 92ಕ್ಕೆ ಕುಸಿದಿದೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ ...

ನವದೆಹಲಿ: ಜೂನ್ 10 ರಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಂಸತ್ತಿನ ನಿರ್ಣಾಯಕ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ 95 ರಿಂದ 92ಕ್ಕೆ ಕುಸಿದಿದೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 29 ರಿಂದ 31 ಕ್ಕೆ ಏರಿಕೆಯಾಗಿದ್ದು, ಕೈ ಸ್ವಲ್ಪ ಬಲ ಹೆಚ್ಚಿಸಿಕೊಂಡಿದೆ.
ರಾಜಸ್ಥಾನ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 57 ಸ್ಥಾನಗಳ ಪೈಕಿ 22 ರಲ್ಲಿ ಗೆದ್ದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.
ನಿವೃತ್ತಿ ಹೊಂದಿದ 57 ಸದಸ್ಯರ ಪೈಕಿ ಬಿಜೆಪಿ 25 ಸದಸ್ಯರನ್ನು ಹೊಂದಿತ್ತು ಮತ್ತು ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿತ್ತು.
ಹೆಚ್ಚಿನ ಬಲದೊಂದಿಗೆ, ಯುವ ಮುಖಗಳನ್ನು ನಾಮನಿರ್ದೇಶನ ಮಾಡಿದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಮೇಲ್ಮನೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಆಕ್ರಮಣಕಾರಿ ಹೋರಾಟ ನಡೆಸಲಿದೆ ಎಂದು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


